ಮ.ಗಾಂ.ಗ್ರಾ.ಪಂ.ರಾ. ವಿಶ್ವವಿದ್ಯಾಲಯ, ಗದಗದಲ್ಲಿ ದಿನಾಂಕ 13.12.2025 ರಂದು ಅಖಿಲ ಭಾರತ ಪಂಚಾಯತ್ ಪರಿಷತ್‌ನ 18ನೇ ರಾಷ್ಟ್ರೀಯ ಸಮ್ಮೇಳನವನ್ನು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸುಭೋಧ್ ಕಾಂತ್ ಸಹಾಯ್ ಅಧ್ಯಕ್ಷರು, ಅಖಿಲ ಭಾರತ ಪಂಚಾಯತ್ ಪರಿಷತ್ ಮತ್ತು ಮಾಜಿ ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ದೇಶದ ವಿವಿಧ ಭಾಗಗಳಿಂದ 1000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.



